Profile cover photo
Profile photo
ನಿಲುಮೆ
113 followers -
ಎಲ್ಲ ತತ್ವದೆಲ್ಲೆ ಮೀರಿ... ಯಾವುದೇ ಜಾತಿ,ಮತ,ತತ್ವಗಳಿಗೆ ಗಂಟು ಬೀಳದೆ, ಎಡ-ಬಲ ಪಂಥೀಯರ ನಡುವೆ ಸಿಕ್ಕಿಕೊಳ್ಳದೆ,ಯಾವುದೇ ಮತ್ತು ಯಾರದೇ ಮರ್ಜಿಗೇ ಬೀಳದೆ ಅನ್ನಿಸಿದ್ದನ್ನು ನೇರವಾಗಿ ಹೇಳುವ ಆ ಮೂಲಕ ಯಾವ ಗುಂಪಿಗೂ ಸೇರದೆಯೆ ಸ್ವತಂತ್ರವಾಗಿ ಯೋಚಿಸುವ ಬಯಕೆ ನಮ್ಮದು.ಇಲ್ಲಿ ಒಂದಿಷ್ಟು ಹಾಸ್ಯ,ಹತಾಶೆ,ನೋವು,ಸಿಟ್ಟು,ಸೆಡವು,ಪ್ರಚಲಿತ ವಿದ್ಯಮಾನಗಳು,ಕಥೆ-ವ್ಯಥೆಗಳು,ಇತಿಹಾಸ, ದೇಶ, ಭಾಷೆ,ಧರ್ಮ,ಸಿನೆಮ,ಪುಸ್ತಕ ಪರಿಚಯ ಎಲ್ಲ ಸಿಗುತ್ತದೆ.ನಮ್ಮ ನಮ್ಮ ಅಭಿಪ್ರಾಯಗಳನ್ನು ಒಂದೇ ವೇದಿಕೆಯಲ್ಲಿ ಹಂಚಿಕೊಳ್ಳಬೇಕೆಂಬ ಆಶಯವೆ ಈ ನಿಲುಮೆ.
ಎಲ್ಲ ತತ್ವದೆಲ್ಲೆ ಮೀರಿ... ಯಾವುದೇ ಜಾತಿ,ಮತ,ತತ್ವಗಳಿಗೆ ಗಂಟು ಬೀಳದೆ, ಎಡ-ಬಲ ಪಂಥೀಯರ ನಡುವೆ ಸಿಕ್ಕಿಕೊಳ್ಳದೆ,ಯಾವುದೇ ಮತ್ತು ಯಾರದೇ ಮರ್ಜಿಗೇ ಬೀಳದೆ ಅನ್ನಿಸಿದ್ದನ್ನು ನೇರವಾಗಿ ಹೇಳುವ ಆ ಮೂಲಕ ಯಾವ ಗುಂಪಿಗೂ ಸೇರದೆಯೆ ಸ್ವತಂತ್ರವಾಗಿ ಯೋಚಿಸುವ ಬಯಕೆ ನಮ್ಮದು.ಇಲ್ಲಿ ಒಂದಿಷ್ಟು ಹಾಸ್ಯ,ಹತಾಶೆ,ನೋವು,ಸಿಟ್ಟು,ಸೆಡವು,ಪ್ರಚಲಿತ ವಿದ್ಯಮಾನಗಳು,ಕಥೆ-ವ್ಯಥೆಗಳು,ಇತಿಹಾಸ, ದೇಶ, ಭಾಷೆ,ಧರ್ಮ,ಸಿನೆಮ,ಪುಸ್ತಕ ಪರಿಚಯ ಎಲ್ಲ ಸಿಗುತ್ತದೆ.ನಮ್ಮ ನಮ್ಮ ಅಭಿಪ್ರಾಯಗಳನ್ನು ಒಂದೇ ವೇದಿಕೆಯಲ್ಲಿ ಹಂಚಿಕೊಳ್ಳಬೇಕೆಂಬ ಆಶಯವೆ ಈ ನಿಲುಮೆ.

113 followers
About
Posts

Post has attachment
Add a comment...

Post has shared content

Post has shared content
Add a comment...

Post has shared content

Post has shared content
ಕೈದಿಯೊಬ್ಬ ಜೈಲು ಸೂಪರಿಂಟೆಂಡೆಂಟ್ ಆಗಿದ್ದು!… ಮ್ಯಾಜಿಸ್ಟ್ರೇಟರೂ ಆಗಿದ್ದು!!
ಲೇಖಕರು - ಕವಿ ನಾಗರಾಜ್

ಉಪತಹಸೀಲ್ದಾರ್ ಆಗಿ ಬಡ್ತಿ ಹೊಂದಿದ ಆತ ಮೈಸೂರಿನಲ್ಲಿ ಒಂದು ವರ್ಷ ಕೆಲಸ ಮಾಡಿದ ನಂತರ ಅವನಿಗೆ ಹೊಳೆನರಸಿಪುರಕ್ಕೆ ವರ್ಗಾವಣೆಯಾಯಿತು. ಆಗ ಕರ್ನಾಟಕದಲ್ಲಿದ್ದ ಜೈಲುಗಳ ಪೈಕಿ ೨೧ ಉಪಕಾರಾಗೃಹಗಳ ಮೇಲ್ವಿಚಾರಣೆ ಹೊಣೆಯನ್ನು ಕಂದಾಯ ಇಲಾಖೆಯ ಉಪತಹಸೀಲ್ದಾರರಿಗೆ ವಹಿಸಿದ್ದು, ಆ ಪೈಕಿ ಹೊಳೆನರಸಿಪುರದ ಉಪಕಾರಾಗೃಹವೂ ಒಂದಾಗಿತ್ತು. ಹೀಗಾಗಿ ಉಪತಹಸೀಲ್ದಾರನಾಗಿದ್ದ ಅವನು ಪದನಿಮಿತ್ತ ಅಲ್ಲಿನ ಜೈಲು ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುವ ಅವಕಾಶವೂ ಲಭ್ಯವಾಯಿತು. ಕೈದಿಯಾಗಿ ಅವರ ಕಷ್ಟ-ನೋವುಗಳ ಅರಿವಿದ್ದ ಅವನು ಅಲ್ಲಿನ ಒಳ್ಳೆಯ ಜೈಲು ಸೂಪರಿಂಟೆಂಡೆಂಟ್ ಅನ್ನಿಸಿಕೊಂಡು ನಾಲ್ಕು ವರ್ಷ ಕಾರ್ಯ ನಿರ್ವಹಿಸಿದ. ಆಗ ಅಲ್ಲಿದ್ದ ಹಲವಾರು ಕೈದಿಗಳು ಈಗಲೂ ಅವನನ್ನು ಗೌರವದಿಂದ ಕಾಣುತ್ತಾರೆ.
ನಂತರದ ಹತ್ತು ವರ್ಷಗಳು ಉಪತಹಸೀಲ್ದಾರ್ ಆಗಿದ್ದ ಅವನಿಗೆ ಬಡ್ತಿ ಸಿಕ್ಕಿ ತಹಸೀಲ್ದಾರನೂ ಆದ. ತಾಲ್ಲೂಕು ದಂಡಾಧಿಕಾರಿಯಾಗಿ ಕಾನೂನು-ಸುವ್ಯವಸ್ಥೆ, ಶಾಂತಿಪಾಲನೆಯ ಹೊಣೆಗಾರಿಕೆ ಇದ್ದು, ಅಪರಾಧಗಳು ಘಟಿಸುವ ಮುನ್ನ ಅದನ್ನು ತಡೆಯುವ ಜವಾಬ್ದಾರಿ ಅವನ ಮೇಲಿತ್ತು. ಅಶಾಂತಿ ನಿರ್ಮಿಸುವವರ ವಿರುದ್ಧ, ಕಾನೂನು-ಸುವ್ಯವಸ್ಥೆ ಸಮಸ್ಯೆ ಉಂಟು ಮಾಡುವವರ ವಿರುದ್ಧ ಕಠಿಣ ಮನೋಭಾವ ಹೊಂದಿದ್ದ ಆತ ಹಲವರನ್ನು ನ್ಯಾಯಾಂಗ ಬಂಧನಕ್ಕೂ ಒಳಪಡಿಸಿದ್ದ. ರಾಷ್ಟ್ರೀಯ ಉತ್ಸವಗಳ ಸಂದರ್ಭದಲ್ಲಿ ರಾಷ್ಟ್ರದ್ವಜವನ್ನು ಹಾರಿಸಿ, ದ್ವಜವಂದನೆ ಮಾಡುವ, ಧ್ವಜವಂದನೆ ಸ್ವೀಕರಿಸುವ ಅವಕಾಶ ಒದಗಿಸಿದ್ದಕ್ಕಾಗಿ ಅವನು ದೇವರಿಗೆ ಆಭಾರಿಯಾಗಿದ್ದ, ಮಾಡಿದ ಕೆಲಸಗಳಲ್ಲಿ ಆತ್ಮತೃಪ್ತಿ ಹೊಂದಿದ್ದ. ೧೨ ವರ್ಷಗಳ ಕಾಲ ಆ ಹುದ್ದೆಯಲ್ಲಿ ಕೆಲಸ ಮಾಡಿ ಸೇವೆಯಿಂದ ಸ್ವ ಇಚ್ಛಾ ನಿವೃತ್ತಿ ಹೊಂದಿದ.
ಆ ವ್ಯಕ್ತಿ ಬೇರಾರೂ ಅಲ್ಲ. . . . . . . . .ನಾನೇ! ನನಗೆ ಇಂತಹ ಅಪರೂಪದ ಅವಕಾಶಗಳನ್ನು ನೀಡಿ, ಅನೇಕ ಅನುಭವಗಳನ್ನು ಹೊಂದುವಂತೆ ಮಾಡಿದ ಆ ದೇವರಿಗೆ ಋಣಿ.
ಲೇಖಕರು - ಕವಿ ನಾಗರಾಜ್
Add a comment...

ರಸ್ತೆಯ ಪಕ್ಕ ನಿಂತಿತ್ತು ದೆವ್ವ!?
ಲೇಖಕರು: - ರಾಜ್ ಕುಮಾರ್

ಇದೊಂದು ನಂಬಲಾಗದ ಘಟನೆ. ಬಹುಷಃ ತರ್ಕಗಳು ಏನಿದ್ದರೂ ನಾನು ನನ್ನ ಅನುಭವವನ್ನು ಮಾತ್ರವೇ ಹೇಳುವುದು. ಇದು ಪ್ರಚಾರಕ್ಕಾಗಿ ಅಗಲಿ ಅಥವಾ ಬೇರೆ ಸ್ವ ಸಾಧನೆಗಾಗಿ ಅಗಲಿ ಹೇಳಿಕೊಳ್ಳುವುದಲ್ಲ. ನಾನು ಸ್ವತಹ ಅನುಭವಿಸಿ ಮನಸ್ಸಿನ ಗೊಂದಲವನ್ನಷ್ಟೇ ಇಲ್ಲಿ ವಿವರಿಸುತ್ತ ಇದ್ದೇನೆ.ಕಳೆದ ಮಂಗಳವಾರ ಅಂದರೆ ದಿನಾಂಕ ೧೭-೦೨-೨೦೦೯ ರಂದು ನಾನು ಮಂಗಳೂರಿನ ಬಂಧುಗಳ ಮನೆಗೆ ಚಂಡಿಕಾ ಹವನದ ನಿಮಿತ್ತ ಹೋಗಿ ಬರುವ ಸಂದರ್ಭ.ನಾನು ಹಾಗು ನನ್ನ ಸಂಬಂಧಿಗಳು ಒಟ್ಟು ನಾಲ್ಕು ಮಂದಿ ಮಾರುತಿ ಕಾರ್ ನಲ್ಲಿ ಬೆಂಗಳೂರು ಕಡೆಗೆ ಬರುತ್ತಾ ಇದ್ದೆವು. ಹೋಗುವಾಗ ಶಿರಾಡಿ ಘಾಟ್ ಮೂಲಕ ಹೋದವರು ಬರುವಾಗಲೂ ಅಲ್ಲೇ ಬರೋಣವೆಂದು ನೆಲ್ಯಾಡಿ ಕೊಕ್ಕಡ ಕ್ರಾಸ್ ತನಕ ಬಂದಾಗ ಘಟ ರಸ್ತೆ ಸಂಪೂರ್ಣ ಬ್ಲಾಕ್ ಆಗಿ ವಾಹನಗಳು ಸಾಲು ಗಟ್ಟಿ ನಿಂತಿದ್ದವು.ಮಾರುತಿ ಕಾರ್ ಸ್ವತಹ ನಾನೇ ಚಲಾಯಿಸುತ್ತಿದ್ದೆ. ನನ್ನ ಪಕ್ಕ ನನ್ನ ಭಾವ ಹಾಗೆ ಹಿಂದಿನ ಸೀಟಿನಲ್ಲಿ ಇಬ್ಬರು ಕುಳಿತಿದ್ದರು.ನನ್ನನ್ನು ಉಳಿದು ಅವರೆಲ್ಲ ವೃತ್ತಿಪರ ಪುರೋಹಿತರಾಗಿದ್ದರು. ರಸ್ತೆ ಬ್ಲಾಕ್ ನೋಡಿ ನಾವು ಚಾರ್ಮಾಡಿ ಮೇಲೆ ಹೋಗೋಣವೆಂದು ಧರ್ಮಸ್ಥಳ ಕಡೆಗೆ ಕಾರ್ ತಿರುಗಿಸಿ, ಚಾರ್ಮಾಡಿ ಮೇಲೆ ಬಂದೆವು.
Add a comment...

Post has attachment
ಯಹ್ ದಿಲ್ಲಿ ಹೇ ದಿಲ್‌ವಾಲೊಂಕಿ” ಎಂಬುದನ್ನು ಆತ ನನಗೆ ತೋರಿಸಿಕೊಟ್ಟಿದ್ದ
ಲೇಖಕರು: - ರಾಕೇಶ್ ಎನ್ ಎಸ್

ಸುಪ್ರೀಂ ಕೋರ್ಟ್‌ನ ಮುಂದೆ ಇಂದು ನಮ್ಮ ರಾಜ್ಯಕ್ಕೆ ಸಂಬಂಧಪಟ್ಟ ಯಾವುದೇ ಪ್ರಕರಣಗಳು ಇಲ್ಲ ಮತ್ತು ಎಂದು ಖಾತ್ರಿ ಮಾಡಿಕೊಂಡ ಬಳಿಕ ಕಚೇರಿಗೆ ಆರಾಮವಾಗಿಯೇ ಹೊರಟಿದ್ದೆ. ಅಪಾರ್ಟ್‌ಮೆಂಟ್‌ನಿಂದ ಹೊರ ಬರುತ್ತಲೆ ರಿಕ್ಷಾವೊಂದು ಬಂತು. ಅದನ್ನು ಏರಿ ಆತ್ಮೀಯರಿಗೆ ಮೆಸೇಜ್ ಕಳಿಸುವ ನನ್ನ ನಿತ್ಯ ಪೂಜೆಯನ್ನು ಶುರು ಮಾಡಿಕೊಂಡೆ. ನಮ್ಮಲ್ಲಿಂದ ಕೌಶಂಬಿ ಮೆಟ್ರೋ ಸ್ಟೇಶನ್‌ಗೆ ೧೫ ನಿಮಿಷಗಳ ಪ್ರಯಾಣ (ಟ್ರಾಫಿಕ್ ಇಲ್ಲದೇ ಹೋದರೆ). ಮೆಟ್ರೋ ಸ್ಟೇಶನ್‌ನ ಬಳಿ ರಿಕ್ಷಾ ಇಳಿದು ಹಣ ಕೊಡೋಣ ಎಂದು ಕಿಸೆಗೆ ಕೈ ಹಾಕಿದರೆ ಪರ್ಸ್ ಇಲ್ಲ. ತಕ್ಷಣವೇ ಶಾಕ್ ಹೊಡೆದಂತೆ ಆಯಿತು. ಇದೀಗ ಕೆಲಸ ಕೆಟ್ಟಿತ್ತು ಅಂತ ಅಂದು ಕೊಂಡರು ವಿಚಲಿತನಾಗಲಿಲ್ಲ. ಪರ್ಸ್ ಮನೆಯಲ್ಲೆ ಬಿಟ್ಟಿದ್ದೇನಾ ಅಥವಾ ಪಿಕ್ ಪಾಕೆಟ್ ಅಯಿತಾ ಅಥವಾ ಎಲ್ಲದರೂ ಬಿತ್ತಾ ಎಂಬ ಗೊಂದಲ ತಲೆಯಲ್ಲಿ ಫ್ಯಾನ್‌ನಂತೆ ತಿರುಗುತ್ತಿತ್ತು. ಹಾಗಂತ ಮೊದಲ ಕಾರಣವನ್ನು ಈ ರಿಕ್ಷಾ ಡ್ರೈವರ್ ಜೊತೆ ಹೇಳುವ ಹಾಗಿಲ್ಲ. ಹೇಳಿದ್ದೆ ಆದರೆ ಅವನು ಯಾವ ಭಾಷೆ ಪ್ರಯೋಗ ಮಾಡುತ್ತಾನೆ ಅನ್ನುವುದು ತಕ್ಷಣವೆ ಫ್ಲಾಶ್ ಆಗಿ ಹೋಗಿತ್ತು. ಇನ್ನು ಯಾರಾದರೂ ಪಿಕ್ ಪಾಕೆಟ್ ಮಾಡಿದ್ದಾರೆ ಎಂದು ಸುಮ್ಮನೆ ಹೇಳುವುದು ಸರಿಯಲ್ಲ. ಏನು ಮಾಡುವುದು ಅಂದು ಕೊಂಡು ತಕ್ಷಣವೇ ಪರ್ಸ್ ಹುಡುಕುವ ರೀತಿ ಮಾಡಿದೆ. ಪರ್ಸ್ ಸಿಗಲೇ ಇಲ್ಲ. ನಾನು ಸಾಮಾನ್ಯವಾಗಿ ನನ್ನ ಪ್ಯಾಂಟ್‌ನ ಮುಂದಿನ ಕಿಸೆಯಲ್ಲಿ ನೂರಿನ್ನೂರು ರೂಪಾಯಿ ಇಟ್ಟುಕೊಂಡಿರುತ್ತೇನೆ. ಆದರೆ ಇಂದು ಆ ರೀತಿಯೂ ಮಾಡಿಲ್ಲ ಎಂಬುದನ್ನು ಕಿಸೆಗೆ ಕೈ ಹಾಕಿ ಖಾತ್ರಿ ಪಡಿಸಿಕೊಂಡೆ. ಸರಿ, ರಿಕ್ಷಾದವನಿಗೆ ನನ್ನ ಸ್ಥಿತಿ ಅರ್ಥವಾಯಿತು. ಅವನು ಏನೂ ಹೇಳಲಿಲ್ಲ. ನನ್ನ ಪುಣ್ಯ. ನನ್ನನ್ನು ಅಲ್ಲೇ ಬಿಟ್ಟು ಮುಂದೆ ಹೋದ. ನನ್ನ ಪ್ರಕಾರ ಅವನು ಮಾಡಿದ ದೊಡ್ಡ ಪುಣ್ಯದ ಕೆಲಸ ಅದೇ.
Add a comment...

Post has attachment
ಕನ್ನಡ ಕಟ್ಟುವಿಕೆಯ ಹತ್ತು ಹಲವು ವಿಷಯಗಳು

ಲೇಖಕರು: -ಡಾ. ಪಂಡಿತಾರಾಧ್ಯ

(ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಅಖಿಲ ಭಾರತ ೭೮ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಕನ್ನಡದ ಹಲವು ವಿಚಾರಗಳನ್ನು ತಿಳಿಸಲು ಮೈಸೂರು ವಿವಿಯ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾಗಿರುವ ಡಾ.ಪಂಡಿತಾರಾಧ್ಯ ಅವರು ಕರಪತ್ರವೊಂದನ್ನು ಸಿದ್ಧಪಡಿಸಿದ್ದರು. ಆ ಕರಪತ್ರದ ಪೂರ್ಣಪಾಠವಿಲ್ಲಿದೆ.)

೩ನೇ ಶತಮಾನದ ಅಶೋಕನ ಶಾಸನಗಳಲ್ಲಿ ಬ್ರಾಹ್ಮೀ ಲಿಪಿಯಲ್ಲಿರುವ ಪ್ರಾಕೃತ ಭಾಷೆಯ ಅಂಕಿಗಳು ಮೊದಲಬಾರಿಗೆ ಕಾಣಿಸುತ್ತವೆ. ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿಯ ಅಶೋಕನ ಶಾಸನದಲ್ಲಿ ೨೫೬ ಎನ್ನುವುದನ್ನು ೨೦೦, ೫೦, ೬ ಎಂಬ ಮೂರು ಪ್ರತ್ಯೇಕ ಅಂಕಿಗಳಲ್ಲಿ ಬರೆಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗುಡ್ನಾಪುರದಲ್ಲಿ ದೊರೆತಿರುವ ಕ್ರಿಶ.೬ನೇ ಶತಮಾದ ಕದಂಬ ರವಿವರ್ಮನ ಸಂಸ್ಕೃತ ಶಾಸನದಲ್ಲಿ ಎಲ್ಲ ಒಂಬತ್ತು ಅಂಕಿಗಳಿವೆ.

ಬ್ರಾಹ್ಮೀ ಲಿಪಿಯ ದಕ್ಷಿಣದ ಕವಲಿನಿಂದ ಬೆಳೆದುಬಂದಿರುವ ಕನ್ನಡ ಲಿಪಿಯಲ್ಲಿ ಕನ್ನಡ ಅಂಕಿಗಳೂ ಇವೆ. ಕ್ರಿ.ಶ. ೮ನೆಯ ಶತಮಾನದಿಂದ ಶಾಸನಗಳಲ್ಲಿ ಕನ್ನಡ ಅಂಕಿಗಳು ಕಾಣಿಸುತ್ತವೆ. ದಕ್ಷಿಣ ಭಾರತದಲ್ಲಿ ಕನ್ನಡ ಮಾತ್ರ ತನ್ನ ಅಂಕಿಗಳನ್ನು ಉಳಿಸಿಕೊಂಡಿರುವುದು ಕನ್ನಡಿಗರ ಹೆಮ್ಮೆ. ಬ್ರಿಟಿಷರು, ಹೈದರಾಬಾದಿನ ನಿಜಾಮರು ತಮ್ಮ ನೋಟುಗಳಲ್ಲಿ ಕನ್ನಡ ಅಂಕಿಗಳನ್ನು ಬಳಸಿದ್ದರು. ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರ(೧೮೪೨)ವನ್ನು ಆರಂಭಿಸಿದ ಜರ್ಮನ್ ಪಾದ್ರಿಗಳು ಕನ್ನಡ ಅಂಕಿಗಳನ್ನೇ ಬಳಸಿದ್ದಾರೆ.
Add a comment...

Post has shared content
ಜಗತ್ತಿನಾದ್ಯಂತ ಸಂಚಲನ ಸೃಷ್ಟಿಸಿದ ಅನಾನಿಮಸ್ ಹ್ಯಾಕರ್ ಗಳು ಭಾರತದಲ್ಲಿ ವಿಫಲರಾಗಿದ್ದೇಕೆ?

ಲೇಖಕರು - ಆದೇಶ್ ಕುಮಾರ್

ಅನೇಕರು ತಮ್ಮ ದುಗುಡವನ್ನು ಕೋಪವನ್ನು ಪ್ರದರ್ಶಿಸಿದರು. ಕೊನೆಗೆ ಅನಾನಿಮಸ್ ಗುಂಪು ಸ್ಪಷ್ಟನೆ ನೀಡಬೇಕಾಯಿತು.
ಅದು ತನ್ನ ಸ್ಪಷ್ಟನೆಯಲ್ಲಿ “ನಾವೂ ಕೂಡ ಭಾರತೀಯರೆ. ನಮಗೂ ಭಾರತೀಯ ಸೇನೆಯ ಮೇಲೆ ಅಷ್ಟೇ ಗೌರವವಿದೆ. ಇನ್ನು ಮುಂದೆ ಯಾವುದೇ ವೆಬ್ಸೈಟ್ ಅನ್ನು ಹ್ಯಾಕ್ ಮಾಡಬೇಕೆಂದರೂ ಇಲ್ಲಿ ಕೇಳಿಯೇ ಮಾಡುತ್ತೇವೆ” ಎಂದು ಹೇಳಿಕೊಂಡಿತ್ತು.
ಜನರನ್ನು ಸಮಾಧಾನ ಮಾಡಲು ಆಗದಿದ್ದಾಗ ಮತ್ತೊಮ್ಮೆ “ನಾವು ಸೇನೆಯ ವೆಬ್ಸೈಟಿಂದ ಯಾವುದೇ ಮಾಹಿತಿಗಳನ್ನು ಕದ್ದಿಲ್ಲ. ಕೇವಲ ಒಂದು ಗಂಟೆಯ ಕಾಲ ಡೌನ್ ಮಾಡಲಾಗಿತ್ತು ಅಷ್ಟೆ” ಎಂದು ಹೇಳಿಕೊಂಡಿತು.
ಹೀಗೆ ಮೇಲಿಂದ ಮೇಲೆ ಸ್ಪಷ್ಟನೆ ನೀಡುತ್ತಾ ಹೋಯಿತು. ಆದರೆ ಅದು ಏನು ಮಾಡಿದರೂ ಮೊದಲಿದ್ದ ವಿಶ್ವಾಸವನ್ನು ಪಡೆದುಕೊಳ್ಳಲಾಗಲಿಲ್ಲ. ಮಾರನೆ ದಿನವೆ ಅದರ ಫೇಸ್ ಬುಕ್ ಮತ್ತು ಟ್ವಿಟ್ಟರ್ ಅಕೌಂಟ್ ಗಳು ಮಾಯವಾಗಿದ್ದವು.
Add a comment...

Post has shared content
ಏಕೆ ಹೀಗೆ ನಮ್ಮ ನಡುವೆ ಹಮ್ಮು ಬೆಳೆದಿದೆ ?
ಲೇಖಕರು: - ವಿ.ಆರ್.ಭಟ್

ಸ್ವಲ್ಪ ಯೋಚಿಸಬೇಕಾಸದ ಸಾಮಾನ್ಯ ಹಾಗೂ ಉತ್ತಮ ಪ್ರಶ್ನೆ! ನಾವು ಬಡಮರ್ಜಿಯಲ್ಲಿದ್ದಾಗ, ನಮ್ಮ ಕುದುರೆ ಸೋತಾಗ, ನಾವು ಪರೀಕ್ಷೆಗಳಲ್ಲಿ ಉತ್ತೀರ್ಣರಾಗದಾಗ, ನಾವು ಚುನಾವಣೆಗಳಲ್ಲಿ ಸೋತಾಗ, ನಮಗೆ ಉದ್ಯೋಗ ಸಿಗದಾಗ, ಸಿಕ್ಕ ಉದ್ಯೋಗ ಕಳೆದುಕೊಂಡಾಗ, ಯಾವುದೋ ರೀತಿಯಲ್ಲಿ ಶಾರೀರಿಕ ಅಸೌಖ್ಯವುಂಟಾದಾಗ, ಅಸಹಾಯ ಸ್ಥಿತಿ ಬಂದೊದಗಿದಾಗ, ಹೊರಲಾರದ ಸಂಸಾರದ ಭಾರ ಜಾಸ್ತಿಯಾದಾಗ, ಶಾರೀರಿಕ/ಮಾನಸಿಕ ವಿಕಲ ಮಕ್ಕಳು ಅಕಸ್ಮಾತ್ ಜನಿಸಿಬಿಟ್ಟಾಗ….ಹೀಗೇ ಹಲವಾರು ಸಮಯಗಳಲ್ಲಿ ನಾವು ಎಲ್ಲರೊಳಗೊಂದು ಎಂಬ ರೀತಿ ಇದ್ದುಬಿಡುತ್ತೇವೆ.

ನಾನು ನೋಡುತ್ತಲೇ ಬಂದಿದ್ದೇನೆ. ಊರಲ್ಲಿ ಕನ್ನಡ ಶಾಲೆಯ ಒಬ್ಬ ಬಡ ಮಾಸ್ತರರಿದ್ದರು. ಒಬ್ಬರ ದುಡಿಮೆ, ಅಂದಿನಕಾಲಕ್ಕೆ ಸಂಬಳವೂ ಅಷ್ಟೆಲ್ಲಾ ಇರಲಿಲ್ಲ. ನಾಲ್ಕು ಮಕ್ಕಳು ಇರುವ ಆರುಮಂದಿಯ ಕುಟುಂಬ. ಮಾಸ್ತರರ ಅಮ್ಮನ ಮುದುಕಿಯೊಬ್ಬಳೂ ಸೇರಿದಂತೇ ಲೆಕ್ಕಹಾಕಿದರೆ ಏಳುಮಂದಿ. ಎಲ್ಲಾ ನಡೆಯಬೇಕಲ್ಲ? ಅಗೆಲ್ಲಾ ಊರ ಜನರೊಟ್ಟಿಗೆ ಸಾದಾ ಸೀದಾ ಇದ್ದ ಮಾಸ್ತರರು ಎಲ್ಲರೊಂದಿಗೂ ಬೆರೆತು ಜನಪ್ರಿಯರಾಗಿದ್ದರು. ಮಾಸ್ತರಿಗೆ ವರ್ಗವಾಯ್ತು, ಬೇರೇ ಊರಿಗೆ ತೆರಳಿದರು, ಮಕ್ಕಳು ಬೆಳೆದವು. ಈಗ ಮಾಸ್ತರರ ಮಕ್ಕಳು ಎಮ್.ಎನ್.ಸಿ ಕಂಪನಿಯಲ್ಲಿ ಕೆಲಸಮಾಡುತ್ತಾರೆ, ಮಾಸ್ತರರಿಗೆ ನಿವೃತ್ತಿಯಾದರೂ ಆಗ ಸಿಕ್ಕ ಹಣದಲ್ಲಿ ಮನೆ ಕಟ್ಟಿದ್ದಾರೆ, ಮಕ್ಕಳು ಅಪ್ಪನಿಗೆ ಕಾರು ಕೊಡಿಸಿದ್ದಾರೆ! ಅಂತೂ ಮಾಸ್ತರರು ಈಗ ಬಡತನ ಎಂಬ ಮಟ್ಟದಲ್ಲಿಲ್ಲ. ಅದಕ್ಕೆ ತಕ್ಕಹಾಗೇ ಮಾಸ್ತರರು ಯಾರೊಡನೆಯೂ ಬೆರೆಯುವುದೂ ಇಲ್ಲ; ತಮ್ಮ ಸರ್ಕಲ್ಲೇ ಬೇರೆ ಎನ್ನುವ ತಂತ್ರಾಂಶ ತಂತ್ರಂಜ್ಞರಂತೇ ಮಾಸ್ತರರಿಗೆ! ’ಅಲ್ಪನಿಗೆ ಐಶ್ವರ್ಯ ಬಂದರೆ ತಿಂಗಳಬೆಳಕಲ್ಲೂ ಕೊಡೆ ಹಿಡಿದನಂತೆ’ ಎಂಬ ಗಾದೆ ಇದೆಯಲ್ಲಾ ಅದೇ ರೀತಿ ಮಾಸ್ತರು ೨ ಫರ್ಲಾಂಗು ದೂರ ಹೋಗುವುದಾದರೂ ಕಾರು ಬೇಕೇ ಬೇಕು. ಬೆಳೆದುನಿಂತ ಮಗಳನ್ನು ಸಾಮಾನ್ಯದ ಯಾರಿಗೂ ಮದುವೆಮಾಡಲು ಸಿದ್ಧರಿಲ್ಲ. ಅಮೇರಿಕಾದಲ್ಲಿರುವ ವ್ಯಕ್ತಿಗಾಗಿ ಹುಡುಕುತ್ತಿದ್ದಾರೆ.
Add a comment...
Wait while more posts are being loaded